7ನೇ ಹಂತದ ಚುನಾವಣೆಗೆ ನಾಳೆ ಅಧಿಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.21-ಹದಿನೇಳನೇ ಲೋಕಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ಮೇ 19ರಂದು ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಇದರೊಂದಿಗೆ ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.ಏಳನೇ ಹಂತದಲ್ಲಿ ಎಂಟು ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಸೋಮವಾರ ಬೆಳಗ್ಗೆ 10.30ಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಲಿದ್ದು, ಅಭ್ಯರ್ಥಿಗಳು ನಾಳೆಯಿಂದಲೇ ತಮ್ಮ ಉಮೇದುವಾರಿಕೆ ಸಲ್ಲಿಸಲು ಅವಕಾಶವಿದೆ.

ಈ ಮಧ್ಯ, ಏಳು ರಾಜ್ಯಗಳ 71 ಲೋಕಸಭಾ ಕ್ಷೇತ್ರಗಳಲ್ಲಿ ಏ. 29ರಂದು ನಡೆಯುವ ನಾಲ್ಕನೇ ಹಂತದ ಚುನಾವಣೆಯ ಮತದಾನಕ್ಕಾಗಿ ಆಯೋಗ ಪೂರ್ವ ಸಿದ್ಧತೆಯಲ್ಲಿ ತೊಡಗಿದೆ.

ನಾಲ್ಕನೇ ಹಂತದ ಚುನಾವಣೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರಾದೇಶಿಕ ಪಕ್ಷಗಳ ಮುಖಂಡರು ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ತಾನ ವಿವಿಧೆಡೆ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮವಿದೆ.ಮೇ 6ರಂದು ನಡೆಯುವ ಐದನೇ ಹಂತದ ಲೋಕಸಭಾ ಚುನಾವಣೆಗಾಗಿ ನಿನ್ನೆ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ.

ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಅಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ಪಡೆಯಲು ನಾಳೆ ಕೊನೆಯ ದಿನವಾಗಿದೆ.ಆರನೇ ಹಂತದ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 23 ಕೊನೆ ದಿನವಾಗಿದ್ದು, ಉಮೇದುವಾರಿಕೆ ಪ್ರಕ್ರಿಯೇ ನಡೆದಿದೆ.

ಏಪ್ರಿಲ್ 11 ರಂದು ಆರಂಭವಾದ ಲೋಕಸಭಾ ಚುನಾವಣೆ ಮೇ 19ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆದು ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin