8 ಹೊಸ ಟ್ರಾಮಾ ಕೇಂದ್ರಗಳ ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

Ramesh-Kumar-01
ಬೆಳಗಾವಿ, ಡಿ.1- ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳ ಕುರಿತು ಪೊಲೀಸ್ ಮತ್ತು ಸಾರಿಗೆ ಇಲಾಖೆಯ ವರದಿ ಆಧರಿಸಿ ಇನ್ನೂ 8 ಹೊಸ ಟ್ರಾಮಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‍ಕುಮಾರ್ ಹೇಳಿದರು. ಕೊರಟಗೆರೆ ಶಾಸಕ ಸುಧಾಕರ್‍ಲಾಲ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಮತ್ತು ಬೆಳಗಾವಿ ಜಿಲ್ಲಾಸ್ಪತ್ರೆಗಳು, ಶಿರಾ ತಾಲ್ಲೂಕು ಆಸ್ಪತ್ರೆಗಳಲ್ಲಿ 8 ಟ್ರಾಮಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮೈಸೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಟ್ರಾಮಾ ಕೇಂದ್ರ ಸ್ಥಾಪನೆ ಪ್ರಗತಿಯಲ್ಲಿದೆ. ಆಪತ್‍ಬಾಂಧವ ಯೋಜನೆಯಡಿ ಇನ್ನೂ 8 ಆಸ್ಪತ್ರೆಗಳಲ್ಲಿ ಹೊಸ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಹರೀಶ್ ಸಾಂತ್ವನ ಯೋಜನೆಯನ್ನು ಜಾರಿಗೆ ತಂದು ತುರ್ತು ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin