ಬ್ರೇಕಿಂಗ್ : ಕಲಬುರ್ಗಿಯಲ್ಲಿ ಮತ್ತೆ ತಬ್ಲಿಘಿ ತಾಂಡವ, ಇಂದು 8 ಮಂದಿಯಲ್ಲಿ ಕೊರೋನಾ ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.28- ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಕ್ಷೀಣಿಸುತ್ತಿದ್ದಂತೆ ಕಂಡು ಬಂದರೂ ಅತ್ತ ಕಲಬುರ್ಗಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ.

ನಿನ್ನೆ ಸಂಜೆ 5 ಗಂಟೆಯಿಂದ ಬೆಳಗ್ಗೆ 12 ಗಂಟೆವರೆಗಿನ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಕೇವಲ ಒಂದು ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾದರೆ, ಕಲಬುರ್ಗಿಯಲ್ಲಿ ಆರು ಪ್ರಕರಣಗಳು ಪತ್ತೆಯಾಗಿವೆ. ಗದಗದಲ್ಲಿ ಒಂದು ಪ್ರಕರಣ ಸೇರಿದಂತೆ ರಾಜ್ಯದಲ್ಲಿ 8 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ. ಮರಣವೊಂದಿದವರ ಸಂಖ್ಯೆ 20ಕ್ಕೆ ತಲುಪಿದ್ದು, ಈ ರೋಗದಿಂದ 198 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ರೆಡ್‍ಜೋನ್ ಆಗಿದ್ದ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಕೊಂಚ ಸಮಾಧಾನ ತಂದಿದೆ.

ಕಂಟೈನ್ಮೆಂಟ್ ಜೋನ್ ಆದ ವಾರ್ಡ್ ನಂ.135 ಪಾದರಾಯನಪುರ ಸಂಪರ್ಕದಿಂದ 48 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಇತ್ತ ಕಲಬುರ್ಗಿಯಲ್ಲಿ ಸೋಂಕಿತ 425 ಮಹಿಳೆಯಿಂದ 6 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಈ ಮಹಿಳೆಗೆ ತಬ್ಲಿಘಿ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ.

ಈ ಮಹಿಳೆಯಿಂದ ನಾಲ್ವರು ಮಹಿಳೆಯರು ಮತ್ತು ಪುರುಷರಿಗೆ ಸೋಂಕು ತಗುಲಿದ್ದು, ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗದಲ್ಲಿ 75ವರ್ಷದ ವೃದ್ಧರೊಬ್ಬರಿಗೆ ತೀವ್ರ ಉಸಿರಾಟದ ತೊಂದರೆಯಿಂದ ಸೋಂಕು ತಗುಲಿದ್ದು, ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 134ರಿಂದ 135ಕ್ಕೆ ಏರಿಕೆಯಾಗಿದ್ದರೆ. ಅತ್ತ ಕಲಬುರ್ಗಿಯಲ್ಲಿ 38ರಷ್ಟಿದ್ದ ಸೋಂಕಿತರ ಸಂಖ್ಯೆ ಈಗ 44ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ.

ಮಧ್ಯಾಹ್ನ 12 ಗಂಟೆವರೆಗೆ 8 ಪ್ರಕರಣಗಳು ಪತ್ತೆಯಾಗಿವೆ. ಸಂಜೆ 5 ಗಂಟೆಯ ಹೆಲ್ತ್ ಬುಲೆಟಿನ್ ವೇಳೆ ಇನ್ನೂ ಮತ್ತಷ್ಟು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇವೆ.ಈ ನಡುವೆ ಯಾವ ಸಂಪರ್ಕವೂ ಇಲ್ಲದೆ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಉಸಿರಾಟದ ತೊಂದರೆಯಿಂದ ಕೊರೊನಾ ಪಾಸಿಟಿವ್ ಕಂಡು ಬರುತ್ತಿರುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಸಮಾಧಾನಕರ ಅಂಶವೆಂದರೆ 520 ಸೋಂಕಿತ ಪ್ರಕರಣಗಳಲ್ಲಿ 198ಸೋಂಕಿತರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Facebook Comments

Sri Raghav

Admin