ಕುವೈತ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

ಪ್ರಯಾಣಿಕರು 7 ದಿನಗಳು ಹಜ್ ಭವನದಲ್ಲಿ ಸಾಂಸ್ಥಿಕ ಸಂಪರ್ಕ ತಡೆಯನ್ನು ಪೂರ್ಣಗೊಳಿಸಿದ ಬಳಿಕ, ರೋಗ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಹಾಗೂ ರೋಗ ಲಕ್ಷಣ ರಹಿತ ವ್ಯಕ್ತಿಗಳು ಏಳು ದಿನಗಳ ಹೋಂ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Facebook Comments