ಮಿನಿ ಬಸ್ ಕಂದಕಕ್ಕೆ ಬಿದ್ದು ಒಂಬ್ಬತ್ತು ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು, ಅ.28- ಮಿನಿ ಬಸ್ ಕಂದಕಕ್ಕೆ ಜಾರಿ ಬಿದ್ದಿದ್ದರಿಂದ ಒಂಬತ್ತು ಮಂದಿ ಮೃತ ಪಟ್ಟ ಪ್ರಕರಣ ದೊಡ ಜಿಲ್ಲೆಯಲ್ಲಿ ನಡೆದಿದೆ. ಥರ್ಥಿಯಿಂದ ದೊಡದಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಸುಯಿಗೌರೈ ಪ್ರದೇಶದಲ್ಲಿ ಆಯತಪ್ಪಿ ಕಂದಕಕ್ಕೆ ಬಿದ್ದಿದೆ. ಬಿದ್ದ ರಬಸಕ್ಕೆ ಬಸ್ ಎರಡು ತುಂಡುಗಳಾಗಿದೆ. ಎಂಟು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಹದಿನೈದು ಮಂದಿ ಗಾಯಗೊಂಡಿದ್ದು, ಅವರಲ್ಲಿ ಗಂಭೀರ ಪರಿಸ್ಥಿತಿಯಲ್ಲಿದ್ದ ಏಳು ಮಂದಿಯನ್ನು ಏರ್‍ಲಿಫ್ಟ್ ಮುಖಾಂತರ ಜಮ್ಮುವಿನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿದೆ.

ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅಪಘಾತದಲ್ಲಿ ತೊಂದರೆಗೀಡಾದವರಿಗೆ ಅಗತ್ಯ ನೇರವು ನೀಡಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Facebook Comments