ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಟ್ರಕ್-ಕಾರು ಡಿಕ್ಕಿ, 9 ವಿದ್ಯಾರ್ಥಿಗಳ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಜು.20- ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 9 ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.

ತಡರಾತ್ರಿ 1 ಗಂಟೆ ಸುಮಾರಿಗೆ ಪುಣೆ-ಸೋಲ್ಲಾಪುರ ಹೆದ್ದಾರಿಯ ಕದಮ್‍ವಾಕ್ ವಸ್ತಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ 9 ವಿದ್ಯಾರ್ಥಿಗಳೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿದ್ಯಾರ್ಥಿಗಳು ಪುಣೆಯಿಂದ ರಾಯ್‍ಗಢ್‍ಗೆ ತೆರಳಿ ತಡರಾತ್ರಿ ಪುಣೆಗೆ ವಾಪಸ್ ಹಿಂದಿರುಗುತ್ತಿದ್ದಾಗ ಕದಮ್‍ವಾಕ್ ವಸ್ತಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ.

ಬಳಿಕ ಎದುರಿನಿಂದ ಬರುತ್ತಿದ್ದ ಟ್ರಕ್‍ಗೆ ವೇಗವಾಗಿ ಹೋಗಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತಪಟ್ಟವರೆಲ್ಲರೂ ಯವತ್ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ. ಮೃತಪಟ್ಟ ವಿದ್ಯಾರ್ಥಿಗಳ ಬಗ್ಗೆ ಸದ್ಯ ಮಾಹಿತಿ ಲಭ್ಯವಾಗಿಲ್ಲ.

Facebook Comments