ಕೊರೋನಾ ಬುಲೆಟಿನ್ : ರಾಜ್ಯದಲ್ಲಿಂದು 9579 ಮಂದಿಗೆ ಪಾಸಿಟಿವ್, 52 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಕಂಟ್ರೋಲ್ ತಪ್ಪು ಹರಡುತ್ತಿದ್ದು ಇಂದು 9579 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 52 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1074869 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 12941ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 6387 ಜನರಿಗೆ ಕೊರೋನಾ ತಗುಲಿದ್ದು, 40 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 488369 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 4855 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 2767 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 985924 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 75985 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin