ರಾಜ್ಯದಲ್ಲಿ ಇಂದು 97 ಮಂದಿಗೆ ಕೊರೋನಾ ಪಾಸಿಟಿವ್..! 2 ಸಾವಿದ ದಾಟಿದ ಸೋಂಕಿತರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 17- ಕಳೆದ 20 ಗಂಟೆಗಳಲ್ಲಿ ರಾಜ್ಯದಲ್ಲಿ 97 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿ 2056ಕ್ಕೆ ಮುಟ್ಟಿದೆ.

ಶನಿವಾರ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆವರೆಗಿನ ಸೋಂಕಿತರ ವಿವರವನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಶೇ.75ರಷ್ಟು ಸೋಂಕಿತರು ಮುಂಬೈ ನಂಟು ಹೊಂದಿರುವುದು ಪತ್ತೆಯಾಗಿದೆ.

ಇಂದು ಚಿಕ್ಕಬಳ್ಳಾಪುರದಲ್ಲೇ ಅತಿ ಹೆಚ್ಚು 26 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಆತಂಕ ಹೆಚ್ಚಿಸಿದೆ. ಬಹುತೇಕರು ಮುಂಬೈನಿಂದ ಬಂದವರೇ ಆಗಿದ್ದು, ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಪರೀಕ್ಷೆ ವೇಳೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಪತ್ತೆಯಾಗಿರುವ 97 ಸೋಂಕಿತರಲ್ಲಿ 15 ಜನ ಮಕ್ಕಳೂ ಇದ್ದಾರೆ. ಇನ್ನು ಉಡುಪಿಯಲ್ಲಿ 18, ಮಂಡ್ಯದಲ್ಲಿ 15, ಹಾಸನದಲ್ಲಿ 14, ಮಂಡ್ಯದಲ್ಲಿ 15, ದಾವಣಗೆರೆಯಲ್ಲಿ 4, ಕಲಬುರಗಿ 6, ಯಾದಗಿರಿ 5, ತುಮಕೂರು 2, ಉತ್ತರ ಕನ್ನಡ 3, ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಕೊಡಗಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

ಕಳೆದ ಒಂದು ತಿಂಗಳಿನಿಂದ ಯಾವುದೇ ಸೋಂಕು ಕಂಡಿರದ ಕೊಡಗಿನಲ್ಲಿ ಈಗ ಒಂದು ಪ್ರಕರಣ ಪತ್ತೆಯಾಗಿರುವುದು ಅಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ.ಮುಂಬೈನಿಂದ ಬಂದಿದ್ದ ವ್ಯಕ್ತಿ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರನ್ನು ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿ ಗಂಟಲು ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು.

ಇಂದು ಬೆಳಗ್ಗೆ ವರದಿ ಪಾಸಿಟಿವ್ ಎಂದು ಬಂದಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಮತ್ತೆ ಆತಂಕ ಹುಟ್ಟಿಸಿದೆ. ಗ್ರೀನ್‍ಝೋನ್ ಪಟ್ಟ ಕಳೆದುಕೊಳ್ಳುವ ಲಕ್ಷಣಗಳು ಕಂಡುಬಂದಿವೆ.ಆದರೆ, ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಯಾವ ಪ್ರಕರಣವೂ ದಾಖಲಾಗದ ಹಿನ್ನೆಲೆಯಲ್ಲಿ ಅಲ್ಪಮಟ್ಟಿನ ನಿಟ್ಟುಸಿರು ಬಿಟ್ಟಂತಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಇಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಹಲವು ಪ್ರದೇಶಗಳನ್ನು ಇಂದು ಕಂಟೈನ್ಮೆಂಟ್ ಪ್ರದೇಶವೆಂದು ಘೋಷಿಸಲಾಗಿದೆ. ಮೂಲಗಳ ಪ್ರಕಾರ, ಇಂದು ಸಂಜೆ ಬಿಡುಗಡೆ ಮಾಡುವ ಆರೋಗ್ಯ ಇಲಾಖೆಯ ಬುಲೆಟಿನ್‍ನಲ್ಲಿ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಾಸನ ಹಾಗೂ ದಕ್ಷಿಣ ಕನ್ನಡದಲ್ಲಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಭದ್ರತಾ ವಿಷಯದಲ್ಲಿ ಹಲವು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹೇಳಲಾಗುತ್ತಿದೆ.

ಇಂದು ರಾಜ್ಯದಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಆರೋಗ್ಯ ಇಲಾಖೆಗೆ ಬರುವ ವರದಿಯೂ ಕೂಡ ತಡವಾಗಿದೆ ಎಂದು ಹೇಳಲಾಗುತ್ತಿದೆ. ಪ್ರತಿದಿನ 1 ಗಂಟೆ ವೇಳೆಗೆ ಬರುತ್ತಿದ್ದ ಹೆಲ್ತ್ ಬುಲೆಟಿನ್ 1 ಗಂಟೆ ತಡವಾಗಿ ಬಂದಿದೆ. ಸಂಜೆ 6 ಗಂಟೆ ವೇಳೆಗೆ ಬಿಡುಗಡೆಯಾಗುವ ಎರಡನೆ ಬುಲೆಟಿನ್‍ನಲ್ಲಿ ಸೋಂಕಿತರ ಸಂಖ್ಯೆ ಶತಕ ದಾಟುವುದು ನಿಶ್ಚಿತ ಎಂದು ಅಕೃತ ಮೂಲಗಳು ತಿಳಿಸಿವೆ.

Facebook Comments

Sri Raghav

Admin