ಜಂಟಿ ಚುನಾವಣಾ ಪ್ರಚಾರ ಮಾಡಿದ ಗುರು-ಶಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಏ.15- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಂಟಿ ಚುನಾವಣಾ ಪ್ರಚಾರವನ್ನು ಇಂದು ಮುಂದುವರಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಚಿಕ್ಕಮಗಳೂರು ಜಿಲ್ಲೆಯ ವಿಜಯಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಉಭಯ ನಾಯಕರು ಭಾಷಣ ಮಾಡಲಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿ ಅಭ್ಯರ್ಥಿಗಳ ಪರವಾಗಿ ಉಭಯ ನಾಯಕರು ಜಂಟಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ವಿಜಯಪುರದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಅವರಲ್ಲದೆ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸೇರಿದಂತೆ ಉಭಯ ಪಕ್ಷಗಳ ಸ್ಥಳೀಯ ನಾಯಕರು, ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಾಯಕರು ಮೈತ್ರಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ