ದೇವೇಗೌಡರ ಕುಟುಂಬಕ್ಕೆ 9 ನಂಬರ್ ಆಗಿಬರಲ್ಲ : ಎ.ಮಂಜು

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜು.24- ಕಳೆದ 10 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಗೆ ತೆರೆ ಬಿದ್ದಿದ್ದು , ಮೈತ್ರಿ ಸರ್ಕಾರವನ್ನು ಯಾರೂ ಬೀಳಿಸಿಲ್ಲ , ಅವರೇ ಬೀಳಿಸಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎ.ಮಂಜು ಇಂದಿಲ್ಲಿ ತಿಳಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಬಳಿಕ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಸುಭಿಕ್ಷವಾಗಿ ಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.

ದೇವೇಗೌಡರ ಕುಟುಂಬಕ್ಕೆ 9ರ ಕಂಟಕ ಇದೆ ಎಂದು ಮುಂಚಿತವಾಗಿಯೇ ಹೇಳಿದ್ದೆ. 1999, 2009, 2019 ಅವರಿಗೆ ಆಗುವುದಿಲ್ಲ ಎಂದಿದ್ದೆ. ಮಂಗಳವಾರ ಸದನ ಮುಂದೂಡಿದರೆ ಒಳೆಯದಾಗುತ್ತದೆ ಎಂಬ ಭಾವನೆಯಿಂದ ರೇವಣ್ಣ ಸದನ ಮೂಂದೂಡಲು ಮುಂದಾಗಿದ್ದರು. ಆದರೆ ಅವರ ಆಸೆ ಈಡೇರಲಿಲ್ಲ ಎಂದು ಲೇವಡಿ ಮಾಡಿದರು.

ಸದ್ಯ ನಾನು ಸಂಪುಟ ಸೇರಿಕೊಳ್ಳುವ ಪ್ರಯತ್ನ ನಡೆಸಿಲ್ಲ ಎಂದು ಇದೇ ವೇಳೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Facebook Comments

Sri Raghav

Admin