ಬೆಂಗಳೂರಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಮನೆಗೆ ಕನ್ನ

ಈ ಸುದ್ದಿಯನ್ನು ಶೇರ್ ಮಾಡಿ

Theft

ಬೆಂಗಳೂರು, ಜೂ.15- ಕುಟುಂಬದವರೊಂದಿಗೆ ಊರಿಗೆ ಹೋಗಿದ್ದ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಘಟನೆ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್‍ಎಸ್‍ಆರ್ ಲೇಔಟ್ ನಾಲ್ಕನೆ ಸೆಕ್ಟಾರ್‍ನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಎಂ.ವಿ.ಮೂರ್ತಿ ಎಂಬುವರ ಮನೆ ಇದೆ.

ಕುಟುಂಬದವರೆಲ್ಲಾ ಜೂ.11ರಂದು ಊರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಹಿಂಬಾಗಿಲು ಪಕ್ಕದಲ್ಲಿದ್ದ ಕಿಟಕಿಯ ಗ್ರಿಲ್ ಮುರಿದು ಆ ಮೂಲಕ ಒಳನುಗ್ಗಿ ಬೀರುವನ್ನು ಒಡೆದು ಅದರಲ್ಲಿದ್ದ ಚಿನ್ನಾ ಮತ್ತು ಬೆಳ್ಳಿ ವಸ್ತುಗಳನ್ನು ಹಾಗೂ ಇತರೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ನಿನ್ನೆ ಮೂರ್ತಿ ಅವರು ಕುಟುಂಬದವರೊಂದಿಗೆ ಮನೆಗೆ ವಾಪಸಾದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳುವಾಗಿರುವ ವಸ್ತುಗಳ ಮೌಲ್ಯ ಸದ್ಯ ತಿಳಿದು ಬಂದಿಲ್ಲ.ಈ ಬಗ್ಗೆ ಎಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin