ಮದುವೆಗೆ ಒಪ್ಪದ ಪ್ರೇಯಸಿ ತಂದೆಯ ಮೇಲೆ ಗುಂಡು ಹಾರಿಸಿದ ಯೋಧ..!

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ,ಮೇ 25-ಮದುವೆಗೆ ವಿರೋಧ ವ್ಯಕ್ತಪಡಿಸಿದ ಪ್ರೇಯಸಿ ತಂದೆ ಮೇಲೆ ಯೋಧ ಗುಂಡು ಹಾರಿಸಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಗುಂಡೇಟಿನಿಂದ ಗಾಯಗೊಂಡಿರುವ ಪ್ರಕಾಶ್ ಎಂಬುವರನ್ನು ಮೆಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಬಿದರಗಟ್ಟೆ ಗ್ರಾಮದ ಪ್ರಕಾಶ್ ಎಂಬುವರ ಮಗಳನ್ನು ಯೋಧ ದೇವರಾಜ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.  ನಿನ್ನೆಯಷ್ಟೇ ರಜೆ ಮೇಲೆ ಬಂದಿದ್ದ ದೇವರಾಜ್ ತಮ್ಮ ಪ್ರೀತಿಯ ವಿಷಯವನ್ನು ಪ್ರೇಯಸಿಯ ತಂದೆ ಪ್ರಕಾಶ್ ಅವರೊಂದಿಗೆ ಚರ್ಚಿಸಿದ್ದಾರೆ.

ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ ಮದುವೆಗೆ ಸಮ್ಮತಿಸದ ಕಾರಣಕ್ಕೆ ಕೋಪಗೊಂಡ ದೇವರಾಜ್ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಪ್ರಕಾಶ್ ಮೇಲೆ ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ಗಂಭೀರ ಗಾಯಗೊಂಡು ಕುಸಿದು ಬಿದ್ದ ಪ್ರಕಾಶ್ ಅವರನ್ನು ತಕ್ಷಣ ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin