ವಿದ್ಯಾರ್ಥಿ ವೇತನ ಪಡೆಯಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, – 2019-20ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಜಿಲ್ಲೆಯ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ- ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,

ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆಯಲು ತಪ್ಪದೇ ತಮ್ಮ ಬ್ಯಾಂಕ್ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments