ನಟ ಅಮಿರ್ ಖಾನ್ ಕಚೇರಿಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಜೂ.30- ಬಾಲಿವುಡ್ ನಟ ಅಮಿರ್ ಖಾನ್ ಅವರ ಕಚೇರಿಯ ಕೆಲವು ಸಿಬ್ಬಂದಿಗಳಲ್ಲಿ ಕೊರೊನಾ ಪರೀಕ್ಷೆಗೊಳಪಟ್ಟಿದ್ದು ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ ಎಂದು ಖಾನ್ ಹೇಳಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನನ್ನ ಕೆಲವು ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದಿದ್ದು, ತಕ್ಷಣ ಅವರೆಲ್ಲರನ್ನೂ ನಿರ್ಬಂಧಿಸಲಾಗಿದೆ. ಬಿಎಂಸಿ ಅಧಿಕಾರಿಗಳು ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಕರೆದೊಯ್ದು ಪರೀಕ್ಷೆಗೊಳಪಡಿಸಿದ್ದಾರೆ. ಈ ಪೈಕಿ ಕೆಲವರಲ್ಲಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ನಮ್ಮ ಸಿಬ್ಬಂದಿಗಳೊಂದಿಗೆ ನಾನು ಮತ್ತು ನಮ್ಮ ಕುಟುಂಬದವರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ನೆಗೆಟಿವ್ ಬಂದಿದೆ. ತಾಯಿಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ಸದ್ಯ ವರದಿ ನೆಗೆಟಿವ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.

Facebook Comments