ಅತೃಪ್ತ ಕೈ ಶಾಸಕರಾದ ಎಸ್‍ಬಿಎಂಗೆ ಕಾದಿದೆಯಾ ಎಸಿಬಿ ಶಾಕ್…?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.12- ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಸೆಡ್ಡು ಹೊಡೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತ ಕೈ ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್ ಹಾಗೂ ಮುನಿರತ್ನ ಅವರ ಮೇಲೆ ಎಸಿಬಿ ಅಸ್ತ್ರ ಬಳಸಿ ಬಗ್ಗು ಬಡಿಯಲು ಸರ್ಕಾರ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಎಸ್‍ಬಿಎಂ ಎಂದೇ ಗುರುತಿಸಿಕೊಂಡಿರುವ ಈ ಮೂವರು ಕೈ ಶಾಸಕರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಪ್ರಕರಣಗಳನ್ನು ಎಸಿಬಿ ತನಿಖೆಗೆ ವಹಿಸಲು ಮೌಖಿಕ ಆದೇಶ ನೀಡಲಾಗಿದೆ ಎನ್ನಲಾಗಿದೆ.

ಈ ಮೂವರು ಶಾಸಕರು 110 ಹಳ್ಳಿಗಳಿಗೆ ಮೀಸಲಿಟ್ಟ ಅನುದಾನ , ಸ್ವಚ್ಛ ಭಾರತ ಅಭಿಯಾನದ ಅನುದಾನ ದುರ್ಬಳಕೆ, ಸರ್ಕಾರಿ ಜಮೀನಿನಲ್ಲಿ ಅಕ್ರಮ ಬಡಾವಣೆ ನಿರ್ಮಾಣ, ಬಾಂಗ್ಲಾ ವಲಸಿಗರಿಗೆ ಅಕ್ರಮವಾಗಿ ಮತದಾನ ಗುರುತಿನಚೀಟಿ ನೀಡಿರುವುದು ಸೇರಿದಂತೆ ಹಲವಾರು ಭ್ರಷ್ಟಾಚಾರದ ವಿರುದ್ಧ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದೇ ಅಲ್ಲದೆ ಎಸಿಬಿಗೂ ದೂರು ನೀಡಿದ್ದರು.

ಇದೀಗ ಎನ್.ಆರ್.ರಮೇಶ್ ಅವರು ನೀಡಿದ ದೂರಿನ ಆಧಾರದ ಮೇಲೆ ಸೋಮಶೇಖರ್, ಭೈರತಿ ಬಸವರಾಜ್ ಹಾಗೂ ಮುನಿರತ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಸರ್ಕಾರ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿರುವ ಈ ಮೂವರನ್ನು ಹಣಿಸಲೇಬೇಕು ಎಂಬ ಉದ್ದೇಶದಿಂದಲೇ ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯನ್ನಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ