ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಚನ್ನರಾಯಪಟ್ಟಣ, ಡಿ.22- ಪಟ್ಟಣದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಇಲ್ಲದ 84 ಸಾವಿರ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.  ನಿನ್ನೆ ಸಂಜೆ ದಿಢೀರ್ ದಾಳಿ ನಡೆಸಿದ ಎಸಿಬಿ ಡಿವೈಎಸ್‍ಪಿ ಪೂರ್ಣಚಂದ್ರ ತೇಜಸ್ವಿ ಮತ್ತು ಸಿಬ್ಬಂದಿ ಮಧ್ಯರಾತ್ರಿವರೆಗೂ ಪರಿಶೀಲನೆ ನಡೆಸಿದರು. ಉಪ ನೋಂದಣಾಧಿಕಾರಿ ನಾಗರಾಜ್ ಸಾರ್ವಜನಿಕರಿಂದ ನಿಗದಿಗಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಈ ವೇಳೆ ನಾಗರಾಜ್ ಅವರನ್ನು ವಿಚಾರಣೆಗೊಳಪಡಿಸಿ ದಾಖಲೆ ಇಲ್ಲದ 84 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಸಬ್‍ರಿಜಿಸ್ಟ್ರಾರ್, ಕಂಪ್ಯೂಟರ್ ಆಪರೇಟರ್, ಏಜೆಂಟ್ ಸೇರಿ ಕಚೇರಿಯ ಹಲವರ ಬಳಿ ಹೆಚ್ಚುವರಿ ಹಣ ಇತ್ತೆಂದು ತಿಳಿದು ಬಂದಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ. ಎಸಿಬಿ ಇನ್ಸ್‍ಪೆಕ್ಟರ್ ಜಗದೀಶ್, ಭರತ್‍ಗೌಡ ಮತ್ತಿತರ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

Facebook Comments