ಜಗಳೂರಿನ ವಲಯ ಅರಣ್ಯಾಧಿಕಾರಿ ನಿವಾಸ-ಕಚೇರಿ ಮೇಲೆ ಎಸಿಬಿ ದಾಳಿ
ಈ ಸುದ್ದಿಯನ್ನು ಶೇರ್ ಮಾಡಿ
ದಾವಣಗೆರೆ, ಜು.11- ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಜಗಳೂರಿನ ವಲಯ ಅರಣ್ಯಾಧಿಕಾರಿ ಎಚ್.ರಾಮಮೂರ್ತಿ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಆಸ್ತಿ-ಪಾಸ್ತಿ ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಚಿತ್ರದುರ್ಗದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಚಿತ್ರದುರ್ಗದ ಕೋಟೆ ರಸ್ತೆಯ ನಿವಾಸ, ತರೀಕೆರೆಯ ಭಕ್ತನ ಕಟ್ಟೆಯ ತೋಟದ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Facebook Comments