ಆರ್‌ಎಫ್‌ಒ ರಾಮಕೃಷ್ಣಪ್ಪ ಮನೆ ಮೇಲೆ ಎಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬಂಗಾರಪೇಟೆ,ಜೂ.10- ಜಿಲ್ಲೆಯ ಶ್ರೀನಿವಾಸಪುರದ ಆರ್‍ಎಫ್‍ಒ ರಾಮಕೃಷ್ಣಪ್ಪನವರ ಕಚೇರಿ ಹಾಗೂ ಮನೆಗಳ ಮೇಲೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿರುವ ಆರ್ ಎಫ್ ಓ ಕಚೇರಿ, ಬಂಗಾರಪೇಟೆಯ ವಿಜಯನಗರದಲ್ಲಿರುವ ಮನೆ ಮತ್ತು ಬಂಗಾರಪೇಟೆ ತಾಲ್ಲೂಕಿನ ಮಿಟ್ಟಹಳ್ಳಿ ಗ್ರಾಮದಲ್ಲಿರುವ ಅವರ ಮನೆಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪಾದನೆ ಆರೋಪಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸರ್ಕಾರಿ ಕೆಲಸದಲ್ಲಿ ಭ್ರಷ್ಟಾಚಾರವೆಸಗಿ ಕೋಟ್ಯಾಂತರ ರೂ. ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದ್ದು, ರಾಮಕೃಷ್ಣಪ್ಪರಮನೆಗಳಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಹಾಗೂ ವಿಚಾರಣೆ ನಡೆಯುತ್ತಿದೆ.

ಬೆಂಗಳೂರಿನಿಂದ ನಾಲ್ಕು ವಾಹನಗಳಲ್ಲಿ ಆಗಮಿಸಿರುವ ಎಸಿಬಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ದಾಳಿ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಸಂಜೆವರೆಗೆ ದಾಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Facebook Comments