ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು, ಜ.1- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.ಜಿಲ್ಲೆಯ ಕಟ್ಲಾಟ್ಕೂರು ಕ್ರಾಸ್ ಬಳಿ ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಶ್ರೀಕಾಂತ್ (24) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮಲ್ಲೇಶ್, ಲಿಂಗಪ್ಪ ಮತ್ತು ರವಿ ಎಂಬವರ ಸ್ಥಿತಿ ಚಿಂತಾಜನಕವಾಗಿದ್ದು , ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಯಚೂರು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ. ಮಾನ್ವ ಪಟ್ಟಣದ ಮಲ್ಲಿಕಾರ್ಜುನ ಚಿತ್ರಮಂದಿರದ ಬಳಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಮರೇಶ್ ರಾಜಲದಿನ್ನಿ (45) ಮೃತಪಟ್ಟಿದ್ದಾನೆ.  ಈ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments