ಭೀಕರ ಅಪಘಾತ, ಐವರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ.ವಿಜಾಪುರ, ಫೆ.9- ಇಂದು ಬೆಳ್ಳಂಬೆಳಗ್ಗೆ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮತ್ತು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಾಪುರ ಜಿಲ್ಲೆಯ ನಿಡಗುಂದಿಯ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ-50ರ ಬಳಿ
ಸಂಭವಿಸಿದೆ. ಹೊಸಪೇಟೆ ಮೂಲದ ರಾಜೇಶ್ (32), ಏಸುದಾಸ್ (32), ಭುಜಂಗರಾವ್ (38) ಮೃತರು ಎಂದು ಗುರುತಿಸಲಾಗಿದೆ.

ನಿಡಗುಂದಿ ಸಮೀಪ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಟ್ಯಾಂಕರ್ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಲಾರಿ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ದಾವಿಸಿರುವ ನಿಡಗುಂದಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾರು-ಟ್ಯಾಂಕರ್ ಡಿಕ್ಕಿ: ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿಯ ಬೆಟ್ರೋಡಿ ರಾಷ್ಟ್ರೀಯ ಹೆದ್ದಾರಿ-75ರ ಬಳಿ ಸಂಭವಿಸಿದೆ.
ಮೃತರನ್ನು ಜೈನಿ ಮತ್ತು ಜೈಸೋನಾ ಎಂದು ಗುರುತಿಸಲಾಗಿದೆ. ಜೈಸೋನಾ ಅವರು ಚರ್ಚ್‍ವೊಂದರಲ್ಲಿ ಪಾದ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Facebook Comments