ಸಂಬಂಧಿಕರ ಅಂತ್ಯ ಸಂಸ್ಕಾರಕ್ಕೆ ತೆರಳುವಾಗ ಬೈಕ್ ಅಪಘಾತ, ಸವಾರರಿಬ್ಬರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.4- ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಮೂಲತಃ ಬಂಗಾರಪೇಟೆ ತಾಲ್ಲೂಕಿನವರಾದ ಮುರಳಿ (22) ಹಾಗೂ ಮಾದೇಶ (18) ಎಂದು ಗುರುತಿಸಲಾಗಿದೆ.

ಮಾರತ್ತಹಳ್ಳಿಯ ಸಲೂನ್ ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದ ಇವರು ಇಂದು ಬೆಳಗ್ಗೆ ನಡೆಯಬೇಕಿದ್ದ ತಮ್ಮ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೈಕ್‍ನಲ್ಲಿ ಆಗಮಿಸುತ್ತಿದ್ದರು. ರಾತ್ರಿ 10.30ರ ಸಮಯದಲ್ಲಿ ಕೆಆರ್ ಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ಟರಹಳ್ಳಿ ಸಿಗ್ನಲ್ ಬಳಿ ಐಷರ್ ಕ್ಯಾಂಟರ್ ಬೈಕ್‍ಗೆ ಡಿಕ್ಕಿ ಹೊಡೆಯಿತು.

ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ. ಶವಗಳನ್ನು ಈಸ್ಟ್ ಪಾಯಿಂಟ್ ಆಸ್ಪತ್ರೆಯ ಶವಾಗಾರದಲ್ಲಿ ಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Facebook Comments