ಸರಣಿ ಅಪಘಾತ ತಪ್ಪಿದ ಅನಾಹುತ, 4 ವಾಹನಗಳು ಜಖಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.8- ಆಟೋ-ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಉಂಟಾದ ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆರ್‍ಟಿ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ, ಹೆಬ್ಬಾಳದ ಆನಂದ ನಗರದ ಬಳಿ ನಿನ್ನೆ ಸಂಜೆ 6.30ರಲ್ಲಿ ಆಟೋ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಈ ಸಂದರ್ಭದಲ್ಲಿ ಸರಣಿ ಅಪಘಾತವಾಗಿ ನಾಲ್ಕು ವಾಹನಗಳು ಜಖಂಗೊಂಡವು. ಇದರಿಂದಾಗಿ ಹೆಬ್ಬಾಳ ಫ್ಲೈ ಓವರ್ ಮೇಲೆ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರ ದಟ್ಟಣೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Facebook Comments