ಬೊಲೆರೋ ವಾಹನ ಡಿಕ್ಕಿ: ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಹೊಸಕೋಟೆ, ಮೇ 14-ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೊಲೆರೋ ಪಿಕ್‍ಅಪ್ ವಾಹನ ಡಿಕ್ಕಿ ಹೊಡೆದು ಆತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿ ಯಡಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುನಿಯಪ್ಪ (55) ಮೃತಪಟ್ಟ ದುರ್ದೈವಿ.

ನಿನ್ನೆ ಸಂಜೆ 5.30ರಲ್ಲಿ ಮೂತ್ಕೂರು ಕಡೆಯಿಂದ ಬೊಲೆರೋ ಪಿಕ್‍ಅಪ್ ವಾಹನದ ಚಾಲಕ ಅತಿವೇಗವಾಗಿ ವಾಹನ ಚಲಾಯಿಸಿಕೊಂಡು ಬಂದಾಘ ರಸ್ತೆ ದಾಟಲು ನಿಂತಿದ್ದ ಮುನಿಯಪ್ಪನಿಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.
ಅನುಗೊಂಡನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ಲೀನರ್‍ನನ್ನು ಬಂಧಿಸಿ, ಪರಾರಿಯಾಗಿರುವ ಚಾಲಕನಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ