ರಸ್ತೆಗುಂಡಿ ತಪ್ಪಿಸಲು ಹೋಗಿ ನಡೆದ ಅಪಘಾತದಲ್ಲಿ ನಾಲ್ವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ದೇವನಹಳ್ಳಿ,ಜೂ.17-ರಸ್ತೆಗುಂಡಿ ತಪ್ಪಿಸಲು ಹೋಗಿ ಖಾಸಗಿ ಬಸ್‍ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ದಾರುಣವಾಗಿ ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಮೃತಪಟ್ಟವರ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲವಾದರೂ ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಿವಾಸಿಗಳು ಎನ್ನಲಾಗಿದೆ.

ಇಂದು ಬೆಳಗ್ಗೆ ಆಟೋದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಬಳಿ ಗುಂಡಿ ಇರುವುದನ್ನು ಗಮನಿಸಿದ ಚಾಲಕ ಅದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ವಿಶ್ವನಾಥಪುರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ