ಸರ್ಕಾರಿ ಬಸ್-ಟಾಟಾ ಏಸ್ ವಾಹನ ಡಿಕ್ಕಿ, ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ,ಅ.11- ಸರ್ಕಾರಿ ಬಸ್ ಹಾಗೂ ಟಾಟಾಏಸ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕೂಡ್ಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಪ್ರಕಾಶ್(35), ನಾಗಪ್ಪ(53) ಮತ್ತು ನಾಗಮ್ಮ (23) ಮೃತಪಟ್ಟ ದುರ್ದೈವಿಗಳು.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಎರಡೂ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿದ್ದಾರೆ.

ಗಾಯಾಳುವನ್ನು ಕೂಡ್ಲಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆ ಸಂಬಂಧ ಕೂಡ್ಲಗಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments