ದ್ರಾಕ್ಷಿ ಸಾಗಿಸುತ್ತಿದ್ದ ವಾಹನ ಪಲ್ಟಿ, ಮೂವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ/ಚಿಕ್ಕೋಡಿ,ಫೆ.25- ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಐಸರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಬಳಿ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿ ಬಳಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಸುವರ್ಣ ಧನ್ಯಪ್ಪಗೊಳ, ಮಾದೇವಿ ಪಡಸಲಗಿ ಮತ್ತು ರಾಜು ನೇಸರ ಮೃತಪಟ್ಟ ದುರ್ದೈವಿಗಳು. ಇವರು ವಿಜಯಪುರ ಜಿಲ್ಲೆಯ ಧನ್ಯಾಳ, ದಾಶ್ಯಾಳ ಹಾಗೂ ರಾಂಪುರದ ನಿವಾಸಿಗಳಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಸರ್ ವಾಹನ ಪಲ್ಟಿಯಾಗಿ ರಸ್ತೆ ಬದಿಯ ಹಳ್ಳದಲ್ಲಿ ಬಿದ್ದುದ್ದು, ಜೆಸಿಬಿ ಮೂಲಕ ವಾಹನವನ್ನು ಹೊರತೆಗೆಯಲಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ