ಟಂಟಂ-ಲಾರಿ ಮುಖಾಮುಖಿ, ಇಬ್ಬರು ಸಾವು, 6ಮಂದಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರ್ಗಿ, ಅ.22-ಟಂಟಂ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಠಾಕ್ರಾ (40), ಚನ್ನಾ (35) ಮೃತಪಟ್ಟ ದುರ್ದೈವಿಗಳು.

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟಂಟಂ ವಾಹನ ಮತ್ತು ಲಾರಿ ನಡುವೆ ಚಕ್ರಗ್ರಾಮದ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಆರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಇವರೆಲ್ಲರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಸೈದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments