ಭೀಕರ ಅಪಘಾತದಲ್ಲಿ 9 ಜನ ಬಲಿ, 25ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಪಿಲಿಬಿಟ್, ಅ.17-ಉತ್ತರ ಪ್ರದೇಶದ ಪುರಾಸ್ಪುರ್ ಎಂಬಲ್ಲಿ ಇಂದು ಮುಂಜಾನೆ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಭತ್ತು ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ. ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ನೋನಿಂದ ಪಿಲಿಬಿಟ್‍ಗೆ ತೆರಳುತ್ತಿದ್ದ ಬಸ್ ಪುರಾಸ್ಪುರ್ ಬಳಿ ಕಾರಿಗೆ ಡಿಕ್ಕಿ ಹೊಡೆದು ಉರುಳಿ ಬಿತ್ತು. ಈ ದುರ್ಘಟನೆಯಲ್ಲಿ ಒಂಭತ್ತು ಮಂದಿ ಮೃತಪಟ್ಟರು. 28 ಮಂದಿ ತೀವ್ರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Facebook Comments