ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ..!

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ : ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸರೋಜ್ ಖಾನ್ ಅವರನ್ನು ಬಾಂದ್ರಾದ ಗುರುನಾನಕ್ ಆಸ್ಪತ್ರೆಗೆ ಕಳೆದ ಜೂನ್ 17ರಂದು ದಾಖಲಿಸಲಾಗಿತ್ತು.
ಆದರೆ ಇಂದು(ಶುಕ್ರವಾರ) ಸುಮಾರು 1.52 ಗಂಟೆಗೆ ಹೃದಯಾಘಾತದ ಪರಿಣಾಮವಾಗಿ ಸರೋಜ್ ಖಾನ್ ಮೃತಪಟ್ಟರು ಎಂದು ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ.

ಸರೋಜ್ ಖಾನ್ 1974 ರಲ್ಲಿ ಬಿಡುಗಡೆಯಾದ ಹಿಂದೆ ‘ನಾಮ್’ ಸಿನಿಮಾದ ಮೂಲಕ ನೃತ್ಯ ಸಂಯೋಜಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ ಸುಮಾರು ನಾಲ್ಕು ದಶಕಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 2 ಸಾವಿರಕ್ಕೂ ಅಧಿಕ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

‘ಡೋಲಾ ರೆ ಡೋಲಾ’, ಏಕ್ ದೋ ತೀನ್’, ಚೋಲಿ ಕೆ ಪೀಚೆ ಕ್ಯಾಹೆ’, ಸೇರಿದಂತೆ ಇನ್ನೂ ಅನೇಕ ಸೂಪರ್ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಸರೋಜ್ ಖಾನ್ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ದೊರಕಿದೆ.

ಒಟ್ಟು ಮೂರು ಬಾರಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾಗಿರುವ ಸರೋಜ್ ಖಾನ್, ಪತಿ ಸೋಹನ್‌ಲಾಲ್, ಪುತ್ರ ಹಮೀದ್ ಖಾನ್ ಹಾಗೂ ಪುತ್ರಿ ಹೀನಾ ಖಾನ್ ಅವರನ್ನು ಅಗಲಿದ್ದಾರೆ.

ಕೊರೋನಾ ನೆಗೆಟಿವ್ :
72 ವರ್ಷದ ಸರೋಜ್ ಖಾನ್ ಅವರಿಗೆ ಕೊರೊನಾ ಪರೀಕ್ಷೆ ಕೂಡ ಮಾಡಲಾಗಿತ್ತು. ಆದರೆ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿತ್ತು. ಆದರೆ ಉಸಿರಾಟದ ಸಮಸ್ಯೆ ಮತ್ತು ಇತರ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Facebook Comments

Sri Raghav

Admin