ಬಾಲಿವುಡ್ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಜೂ.6- ಭಾರತೀಯ ಚಿತ್ರರಂಗದ ಹಿರಿಯ ನಟ ದಿಲಿಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
98 ವರ್ಷದ ದಿಲಿಪ್ ಕುಮಾರ್ ಅವರು ನಾನ್ ಕೋವಿಡ್ ಹಿಂದುಜಾ ಆಸ್ಪತ್ರೆಗೆ ಇಂದು ಬೆಳಗ್ಗೆ ಹೋಗಿದ್ದರು. ನಿಯಮಿತವಾದ ಪರೀಕ್ಷೆಗಳಿಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ದಿಲಿಪ್ ಕುಮಾರ್ ಅವರ ಅಧಿಕೃತವಾದ ಟ್ವಿಟರ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ಡಾ.ನಿತಿನ್ ಗೋಖಲೆ ಅವರ ನೇತೃತ್ವದ ವೈದ್ಯಕೀಯ ಸಿಬ್ಬಂದಿಗಳ ತಂಡ ದಿಲೀಪ್ ಅವರ ಆರೋಗ್ಯ ಪರೀಕ್ಷೆ ಮಾಡುತ್ತಿದೆ. ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಲಾಗಿದೆ.

Facebook Comments