BREAKING : ನಟ ಸಂಚಾರಿ ವಿಜಯ್ ಇನ್ನಿಲ್ಲ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಶನಿವಾರ ರಾತ್ರಿ ಗೆಳೆಯ ನವೀನ್ ಜೊತೆಗೆ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ನಟ ಸಂಚಾರಿ ವಿಜಯ್ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅಪಘಾತಗೊಂಡಿದ್ದರು. ತಲೆಯ ಎಡಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು, ರಕ್ತಸ್ರಾವ ಕೂಡ ಆಗಿತ್ತು. ಕೂಡಲೇ ಅವರನ್ನು ನಟ ಸುದೀಪ್ ಮನವಿ ಮೇರೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ನಿಧನರಾಗಿದ್ದಾರೆ .

#  ಅಂಗಾಂಗ ದಾನಕ್ಕೆ ನಿರ್ಧಾರ
ಚಿತ್ರ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರೀಯಗೊಂಡಿರುವುದರಿಂದ ಅವರ ದೇಹದ ಅಂಗಾಂಗ ದಾನ ಮಾಡಲು ಕುಟುಂಬ ವರ್ಗದವರು ತೀರ್ಮಾನಿಸಿದ್ದಾರೆ.

ಅಪಘಾತಕ್ಕೆ ಒಳಗಾದ ವಿಜಯ್ ಅವರನ್ನು ಆಸ್ಪತ್ರೆಗೆ ಕರೆ ತಂದಾಗ ಅವರ ಸ್ಥಿತಿ ಗಂಭೀರವಾಗಿತ್ತು. ವೈದ್ಯರ ತಂಡ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಿ 36 ಗಂಟೆಗಳ ಕಾಲ ಅಬ್ಸರ್ವೇಷನ್‍ನಲ್ಲಿ ಇಟ್ಟಿದ್ದೇವು. ಆದರೂ ಚೇತರಿಕೆ ಕಂಡು ಬಂದಿಲ್ಲ. ಅವರ ಮೆದುಳಿನ ಊತ ಕಡಿಮೆಯಾಗಿಲ್ಲ. ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಇದರ ಜತೆಗೆ ಚಿಕಿತ್ಸೆಗೂ ಅವರ ಸ್ಪಂಧಿಸುತ್ತಿಲ್ಲ. ಹೀಗಾಗಿ ಅವರ ಮೆದುಳು ನಿಷ್ಕ್ರೀಯಗೊಂಡಿರುವ ಸಾಧ್ಯತೆ ಇದೆ ಎಂದು ಅಪೊಲೋ ಆಸ್ಪತ್ರೆ ವೈದ್ಯ ಡಾ.ಅರುಣ್‍ನಾಯ್ಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ವಿಜಯ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಿರುವ ನ್ಯೂರೋ ಸರ್ಜನ್ ಶೈಲೇಶ್‍ಕುಮಾರ್ ಮಾತನಾಡಿ, ನಾವು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ, ಆದರೆ, ವಿಜಯ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಇದನ್ನು ನೋಡಿದರೆ ಅವರ ಮೆದುಳು ನಿಷ್ಕ್ರೀಯಗೊಂಡಿರುವುದು ಖಚಿತ ಎಂದಿದ್ದಾರೆ.

ವಿಜಯ್ ಅತ್ಯುತ್ತಮ ನಟರಾಗಿದ್ದರೂ ಇದರ ಜತೆ ಕೊರೊನಾ ಸೋಂಕಿತರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತ ಸಮಾಜಮುಖಿ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು. ಹೀಗಾಗಿ ಅವರ ಮೆದುಳು ನಿಷ್ಕ್ರೀಯಗೊಂಡರೆ ಅವರ ದೇಹದ ಅಂಗಾಂಗ ದಾನ ಮಾಡಲು ತೀರ್ಮಾನಿಸಿದ್ದೇವೆ ಎಂದು ವಿಜಯ್ ಸಹೋದರ ಸಿದ್ದೇಶ್ ತಿಳಿಸಿದ್ದಾರೆ.

Facebook Comments

Sri Raghav

Admin