ಆಸ್ಪತ್ರೆಗೆ ದಾಖಲಾದ ನಟ ಶರಣ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.26- ಅವತಾರ ಪುರುಷ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾಗಲೇ ಅನಾರೋಗ್ಯಕ್ಕೊಳಗಾದ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್‍ಎಂಟಿ ಗ್ರೌಂಡ್‍ನಲ್ಲಿ ಅವತಾರ ಪುರುಷ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಚಿತ್ರದ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸುತ್ತಿದ್ದು, ನಿರ್ದೇಶಕ ಸುನಿ ಈ ಚಿತ್ರದ ನಿರ್ದೇಶಕರಾಗಿದ್ದಾರೆ. ಕೊರೊನಾದ ಲಾಕ್‍ಡೌನ್‍ನಿಂದಾಗಿ ಅವತಾರ ಪುರುಷನ ಶೂಟಿಂಗ್ ಸ್ಥಗಿತಗೊಂಡಿತ್ತು.

ಈ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು ಇಂದು ಚಿತ್ರೀಕರಣದ ಸಮಯದಲ್ಲೇ ನಾಯಕನಟ ಶರಣ್‍ಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ನಿರ್ದೇಶಕ ಸುನಿ ಹಾಗೂ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನ್ ಅವರು ಶರಣ್ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶರಣ್ ಅವರನ್ನು ಆಸ್ಪತ್ರೆಗೆ ಸೇರಿಸಿರುವ ವಿಷಯ ತಿಳಿದು ಶರಣ್ ಸೋದರಿ, ನಟಿ ಶ್ರುತಿ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Facebook Comments

Sri Raghav

Admin