ಸ್ಯಾಂಡಲ್ವುಡ್ ನಟ ಶೇಷಗಿರಿ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.26- ಯುವತಿಗೆ ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಟ ಶೇಷಗಿರಿಯನ್ನು ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್‍ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವತಿಯೊಬ್ಬರಿಗೆ ವಂಚಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ಬಗ್ಗೆ ಯುವತಿಯ ಹೇಳಿಕೆಯನ್ನು ಕೂಡ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಿದ್ದು, ಕಿಲಾಡಿ ಚಿತ್ರಗಳು ಸೇರಿದಂತೆ ಹಲವು ಚಿತ್ರಗಳು ತೆರೆಗೆ ಬರಬೇಕಾಗಿದೆ.

Facebook Comments

Sri Raghav

Admin