ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ, ಕೊರೊನಾ ವರದಿಯಲ್ಲಿ ನೆಗೆಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.8- ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ಅವರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದರು. ಅವರಿಗೆ ಅಸ್ತಮಾ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ರಾತ್ರಿ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಜಯಂತಿ ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದ್ದು ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ತಿಂಗಳ ಹಿಂದೆಯೂ ಜಯಂತಿ ಅವರಿಗೆ ಅಸ್ತಮಾ ಕಾಯಿಲೆ ಬಿಗಡಾಯಿಸಿತ್ತು. ಆಗ ಸಹಾ ವಿಕ್ರಂ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

Facebook Comments