ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.25- ಕಡಬಗೆರೆ ಸಮೀಪ ಪುನರ್ವಸತಿ ಕೇಂದ್ರದಲ್ಲಿ ಬಿಗ್‍ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡಬಗೆರೆ ಜನಪ್ರಿಯ ಲೇಔಟ್‍ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಬಟ್ಟೆಯಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡು ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಯಶ್ರೀ ಅವರು ಈ ಕೇಂದ್ರಕ್ಕೆ ಹಲವಾರು ಬಾರಿ ಬಂದು ಹೋಗಿದ್ದರು. ಕಳೆದ 20ರಂದು ಮತ್ತೆ ಕೇಂದ್ರಕ್ಕೆ ಬಂದಿದ್ದ ಜಯಶ್ರೀ ನಿನ್ನೆ ರಾತ್ರಿ ಊಟ ಮಾಡಿ ತಮ್ಮ ಕೊಠಡಿಗೆ ಹೋಗಿದ್ದರು. ಬೆಳಗ್ಗೆ ಎಷ್ಟು ಹೋತ್ತಾದರೂ ಬಾಗಿಲು ತೆಗೆದಿರಲಿಲ್ಲ.

ಪುನರ್ವಸತಿ ಕೇಂದ್ರದ ಸಿಬ್ಬಂದಿಗಳು ಸ್ಥಳೀಯರನ್ನು ಕರೆಸಿ ಅವರ ಸಮ್ಮುಖದಲ್ಲಿ ಬಾಗಿಲು ಒಡೆದು ನೋಡಿದಾಗ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಸ್ಥಳಕ್ಕೆ ಆಗಮಿಸಿರುವ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಅವರ ಕೊಠಡಿಯನ್ನು ಸಂಪೂರ್ಣ ಶೋಸಿದ್ದಾರೆ. ಜಯಶ್ರೀ ಆತ್ಮಹತ್ಯೆಗೆ ನಿಖರವಾದ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin