ನಟಿ ಸಂಜನಾ ಜಾಮೀನು ನಾಳೆಗೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.18- ಮಾದಕ ವಸ್ತು ಜಾಲದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಕಳೆದ 11 ದಿನಗಳಿಂದ ಸಿಸಿಬಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ನಟಿ ಸಂಜನಾ ಗಲ್ರಾನಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ನಡುವೆ ಸಂಜನಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು ನಾಳೆಯವರೆಗೂ ಸಂಜನಾಳಿಗೆ ಜೈಲೇ ಗತಿಯಾಗಿದೆ.

Facebook Comments