ವಿಷ ಸೇವಿಸಿ ನಟಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.1- ಸ್ಯಾಂಡಲ್‍ವುಡ್‍ನ ನಟಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.  ಚಂದನ(29)ಅವರು ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಚಾನೆಲ್‍ಗಳ ಜಾಹಿರಾತು ಹಾಗೂ ಕೆಲ ಕಿರುತೆರೆ ಧಾರಾವಾಹಿಗಳು ನಟಿಸಿದ್ದ ಇವರು ಸೆಲ್ಫಿ ವಿಡಿಯೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ.

ವಿಷ ಸೇವಿಸಿದ ನಂತರ ತೀವ್ರ ಅಸ್ವಸ್ಥರಾದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾರೆ.

ನಗರದ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿನ ಅವರ ಮನೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿದ್ದಾರೆ. ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments