ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಲ್ಯಾಬ್ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಜೂ.3- ಜಿಲ್ಲಾಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದ್ದು, ಇನ್ನು ಮುಂದೆ ಜಿಲ್ಲಾಯ ಜನ ಭಯ ಪಡಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದ್ದಾರೆ.  ಕೇವಲ 15 ದಿನಗಳಲ್ಲಿ ಪ್ರಯೋಗಾ ಲಯ ಆರಂಭಿಸಲು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರೇ ಕಾರಣ ಎಂದರು.

ಶ್ರೀಗಳ ಸಾನ್ನಿಧ್ಯದಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಉದ್ಘಾಟಿಸಿದ ನಂತರ ಮಾತನಾಡಿದ ಸಚಿವರು, ಅಗತ್ಯವಿರುವ ಕೋವಿಡ್-19 ಟೆಸ್ಟಿಂಗ್ ಲ್ಯಾಬ್‍ಅನ್ನು ಕೆಲವೇ ದಿನಗಳಲ್ಲಿ ನಿರ್ಮಿಸಿದ್ದಾರೆ. ಇಷ್ಟುದಿನ ಟೆಸ್ಟಿಂಗ್ ರಿಪೋರ್ಟ್‍ಗಾಗಿ ಒಂದೆರಡು ದಿನ ಕಾಯಬೇಕಾಗುತ್ತಿತ್ತು. ಈಗ 24 ಗಂಟೆಯಲ್ಲಿ ಪರೀಕ್ಷಾ ವರದಿ ಸಿಗಲಿದೆ. ಟೆಸ್ಟಿಂಗ್‍ಗೆ ಬೇಕಾದ ಅಗತ್ಯ ಹಣವನ್ನು ಸರ್ಕಾರ ಭರಿಸಲು ಸಿದ್ಧವಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದೇ ವೇಳೆ ಸಾರ್ವಜನಿಕರು ಯಾರೂ ಕೂಡ ಮದ್ಯ ಹಾಗೂ ಧೂಮಪಾನ ಮಾಡಬೇಡಿ. ಆರೋಗ್ಯಯುತ ಜೀವನಕ್ಕೂ ಇದು ಮಾರಕ. ಹೀಗಾಗಿ ದುಶ್ಚಟಗಳಿಂದ ದೂರವಿರಿ ಎಂದು ನಾರಾಯಣಗೌಡ ಮನವಿ ಮಾಡಿದ್ದಾರೆ.  ಅಲ್ಲದೆ, ಮೈಶುಗರ್ ಸಕ್ಕರೆ ಕಾರ್ಖಾನೆ ಸಂಬಂಧ ಸಿಎಂ ಜೊತೆ ಮಾತನಾಡಲಾಗಿದೆ.

ಖಾಸಗಿಯವರಿಗೆ ಕೊಡುವುದು ಬೇಡ ಎಂದು ಸಿಎಂ ಬಳಿ ಮನವಿ ಮಾಡಿದ್ದಾ. ಅಂತೆಯೇ ಖಾಸಗಿಗೆ ಕೊಡುವ ನಿರ್ಧಾರ ಕೈ ಬಿಡಲಾಗಿದೆ. ಸರ್ಕಾರವೇ ನಡೆಸಬೇಕೇ ಎಂಬುದರ ಬಗ್ಗೆ ಮುಖ್ಯಮಂತ್ರಿಯವರು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮಠದ ಆವರಣದಲ್ಲಿ ಸಚಿವರು ಗಿಡ ನೆಟ್ಟರು. ಈ ಸಂದರ್ಭದಲ್ಲಿ ಶಾಸಕ ಸುರೇಶ್‍ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಮತ್ತಿತರ ಗಣ್ಯರಿದ್ದರು.

Facebook Comments