ಆಡಳಿತ ಸೇವೆಗಳಲ್ಲಿ ಕನ್ನಡಿಗರ ಸೇರ್ಪಡೆ ಉತ್ತೇಜಿಸಲು ಸಾಮಥ್ರ್ಯ-ಸಾರಥ್ಯ ಕಾರ್ಯಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.8- ಕೇಂದ್ರ ಮತ್ತು ರಾಜ್ಯ ಆಡಳಿತ ಸೇವೆಗಳಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರ ಸೇರ್ಪಡೆಯನ್ನು ಉತ್ತೇಜಿಸಲು ಸಾಮಥ್ರ್ಯ- ಸಾರಥ್ಯ ಎಂಬ ಹೊಸ ಕಾರ್ಯಕ್ರಮಕ್ಕೆ 5 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ.

ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ ಈ ವಿಷಯ ಪ್ರಸ್ತಾಪಿಸಿ, ಬ್ಯಾಂಕಿಂಗ್, ರೈಲ್ವೆ ಇತ್ಯಾದಿ ಉದ್ಯೋಗಗಲಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರ ಸೇರ್ಪಡೆಯನ್ನು ಉತ್ತೇಜಿಸಲು ಈ ಹೊಸ ಕಾರ್ಯಕ್ರಮದಡಿ ಅಂದಾಜು 5 ಲಕ್ಷ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲಾಗುವುದು. ಈ ಕಾರ್ಯಕ್ರಮಕ್ಕಾಗಿ ಆರ್ಥಿಕ ವರ್ಷದಲ್ಲಿ 5 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

ಜಾಗತಿಕ ಮಟ್ಟದ ಅತ್ಯುತ್ತಮ ವಿವಿಗಳ ಸಹಯೋಗದೊಂದಿಗೆ ಶೈಕ್ಷಣಿಕ ನಾಯಕತ್ವ ಎಂಬ ವಿನೂತನ ಕಾರ್ಯಕ್ರಮ ರೂಪಿಸಲಾಗುವುದು. ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಬಗ್ಗೆ ಶಿಕ್ಷಣ ಇಲಾಖೆ ಸಿಬ್ಬಂದಿಗೆ ಅರಿವು ಮೂಡಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು.

Facebook Comments

Sri Raghav

Admin