ಉಪಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಸಿಎಂ ನಿವಾಸಕ್ಕೆ ದೌಡಾಯಿಸಿದ ಸಚಿವರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.9- ಉಪಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಇಂದು ಸಚಿವರು ಕಾರ್ಯಕರ್ತರ ದಂಡು ಹರಿದುಬಂದಿತು. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸಚಿವರಾದ ಬಸವರಾಜ್ ಬೊಮ್ಮಾಯಿ, ಸಿ.ಸಿ.ಪಾಟೀಲ್, ಆರ್.ಅಶೋಕ್ ಸೇರಿದಂತೆ ಶಾಸಕರು, ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದರು.

ಅದರಲ್ಲೂ ಜೆಡಿಎಸ್‍ನ ಭದ್ರಕೋಟೆ ಸಕ್ಕರೆ ಜಿಲ್ಲೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿರುವುದಕ್ಕೆ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರಗೂ ಅಭಿನಂದನೆ ಸಲ್ಲಿಸಲಾಯಿತು. ಕೆ.ಆರ್.ಪೇಟೆಯಲ್ಲಿ ಗೆಲುವು ಖಾತ್ರಿಯಾಗುತ್ತಿದ್ದಂತೆ ಧವಳಗಿರಿ ನಿವಾಸಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ ತಮ್ಮ ತಂದೆಯಿಂದ ಆಶೀರ್ವಾದ ಪಡೆದರು.

ಅಭ್ಯರ್ಥಿ ಗೆಲುವಿಗೆ ವಿಶೇಷ ಪರಿಶ್ರಮ ವಹಿಸಿದ್ದ ಪುತ್ರನಿಗೆ ಬಿಎಸ್‍ವೈ ಸಿಹಿ ನೀಡಿ ಶುಭಾಷಯ ಹೇಳಿದರು.  ಬಳಿಕ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮೈಸೂರು ಪೇಟ ತೊಡಿಸಿ ಶುಭಕೋರಿದರು.

Facebook Comments

Sri Raghav

Admin