ಅಯೋಧ್ಯೆ ತೀರ್ಪಿನ ಪರಾಮರ್ಶೆಗೆ ಎಐಎಂಪಿಬಿ ನಿರ್ಧಾರ..?

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ, ನ.17(ಪಿಟಿಐ)-ಶತಮಾನಗಳಷ್ಟು ಹಳೆಯದಾದ ಅಯೋಧ್ಯೆಯ ರಾಮಮಂದಿರ-ಬಾಬರಿ ಮಸೀದಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಅಸಮಾಧಾನಗೊಂಡಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ (ಎಐಎಂಪಿಬಿ) ಸರ್ವೋನ್ನತ ನ್ಯಾಯಾಲಯಕ್ಕೆ ಮರುಪರಾಮರ್ಶ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ತೀರ್ಪು ಹಿನ್ನೆಲೆಯಲ್ಲಿ ಇಂದು ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಎಐಎಂಪಿಬಿ ಮಹತ್ವದ ಸಭೆ ನಡೆಯಿತು. ಬೆಳಗ್ಗೆಯಿಂದ ನಡೆದ ಸುದೀರ್ಘ ಸಭೆಯಲ್ಲಿ ಮಂಡಳಿಯ ಪ್ರಮುಖರು ತೀರ್ಪನ್ನು ಪರಾಮರ್ಶಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದರು ಎಂದು ಮೂಲಗಳು ತಿಳಿಸಿವೆ.

ಮಂಡಳಿ ಸಭೆ ಹಿನ್ನೆಲೆಯಲ್ಲಿ ಲಕ್ನೋದಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮಂಡಳಿ ಕೈಗೊಳ್ಳಬಹುದಾದ ತೀರ್ಮಾನದಿಂದ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದ್ದ ಸುಪ್ರೀಂಕೋರ್ಟ್ ಈ ಸ್ಥಳದ ಸನಿಹದಲ್ಲೇ ಸೂಕ್ತ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಾಗವನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.

ಆದರೆ ಈ ತೀರ್ಪಿನ ಬಗ್ಗೆ ಎಐಎಂಪಿಬಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ ಸುನ್ನಿ ವಕ್ಫ್ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸದಿರಲು ಈಗಾಗಲೇ ನಿರ್ಧರಿಸಿದೆ.

Facebook Comments

Sri Raghav

Admin