ತಾಂತ್ರಿಕ ದೋಷದಿಂದ ಐಎಎಫ್ ವಿಮಾನ ಪತನ, ಪೈಲಟ್ ಸೇಫ್

ಈ ಸುದ್ದಿಯನ್ನು ಶೇರ್ ಮಾಡಿ

ಗ್ವಾಲಿಯರ್,ಅ.21-ಭಾರತೀಯ ವಾಯುಪಡೆಗೆ ಸೇರಿದ ವಿಮಾನ ಪತನವಾಗಿದ್ದು, ಪೈಲಟ್ ಸುರಕ್ಷಿತವಾಗಿದ್ದಾರೆ. ಇಂದು ಮುಂಜಾನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೀರಜ್ 2000 ಏರ್‍ಕ್ರಾಫ್ಟ್ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನ ಪತನಗೊಂಡಿದೆ.
ವಿಮಾನ ಪತನದ ಮುನ್ಸೂಚನೆ ದೊರೆಯುತ್ತಿದ್ದಂತೆ ಪೈಲಟ್ ವಿಮಾನದಿಂದ ಪ್ಯಾರಾಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಮನಕ್‍ಭಾಗ್ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ವಿಮಾನ ಪತನವಾಯಿತು. ಪೈಲಟ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಭೀಂಡ್ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇಂದು ಮುಂಜಾನೆ ಗ್ವಾಲಿಯರ್‍ನಲ್ಲಿರುವ ಏರ್‍ಬೇಸ್‍ನಿಂದ ವಿಮಾನ ಹಾರಾಟ ಆರಂಭಿಸಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಹಾಗೂ ವಾಯುಪಡೆ ಅಕಾರಿಗಳು ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin