ಡಿಕೆಶಿ ಪುತ್ರಿಯ ನಿಶ್ಚಿತಾರ್ಥಕ್ಕೆ ಬಂದವರಲ್ಲಿ ಕಾಂಗ್ರೆಸ್ಸಿಗರಿಗಿಂತ ಬಿಜೆಪಿಗರೇ ಹೆಚ್ಚು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.20- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಿಗಿಂತ ಬಿಜೆಪಿ ನಾಯಕರೇ ಹೆಚ್ಚಾಗಿ ಕಾಣಿಸಿಕೊಂಡಿದ್ದು ಕುತೂಹಲ ಮೂಡಿಸಿ ಅಚ್ಚರಿಗೆ ಕಾರಣವಾಗಿತ್ತು.

ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರನ್ನು ಆಹ್ವಾನಿಸದೆ ಬಿಜೆಪಿ ನಾಯಕರನ್ನು ಆಹ್ವಾನಿಸಿದ್ದಾರೆಯೇ ಎಂಬ ಗೊಂದಲಗಳು ಮೂಡಿದವು. ಸಾಮಾಜಿಕ ಜಾಲತಾಣಗಳಲ್ಲಿ ತರಹೇವಾರಿ ವ್ಯಾಖ್ಯಾನಗಳುಕೇಳಿ ಬಂದಿ ದ್ವು. ಅವೆಲ್ಲವಕ್ಕೂ ಇದೀಗ ಉತ್ತರ ಸಿಕ್ಕಿದೆ.

ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಉದ್ಯಮಿ ದಿ.ಸಿದ್ದಾರ್ಥ ಹೆಗ್ಡೆ ಅವರ ಪುತ್ರ ಅಮತ್ರ್ಯಹೆಗ್ಡೆ ಅವರ ನಿಶ್ಚಿತಾರ್ಥ ನಿನ್ನೆ ಸಂಪ್ರದಾಯ ಬದ್ಧವಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಅವರು ಕುಟುಂಬದ ಸದ್ಯರನ್ನು ಬಿಟ್ಟು ಸ್ನೇಹಿತರಿಗೆ, ಅಭಿಮಾನಿಗಳಿಗೆ, ರಾಜಕೀಯ ಮಿತ್ರರಿಗೆ, ಹಿತೈಷಿಗಳಿಗೆ, ಉದ್ಯಮಿ ಸ್ನೇಹಿತರೂ ಸೇರಿದಂತೆ ಯಾರಿಗೂ ಆಹ್ವಾನ ನೀಡಿರಲಿಲ್ಲ. ಹಾಗೆ ನೋಡಿದರೆ ಡಿ.ಕೆ.ಶಿವಕುಮಾರ್ ಬಳಗ ಅತ್ಯಂತ ದೊಡ್ಡದಾಗಿದೆ. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲಾ ದೇಶದ ಬೇರೆ ಬೇರೆ ರಾಜ್ಯಗಳಲ್ಲೂ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಳಗಗಳಿವೆ.

ಕೋವಿಡ್ ಕಾರಣದಿಂದಾಗಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೂ ಜನ ಸಂದಣಿಗೆ ಮಿತಿ ಹೇರಲಾಗಿದೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ 150 ಮಂದಿ ಮಾತ್ರ ಭಾಗವಹಿಸಬೇಕೆಂಬ ಷರತ್ತುಬದ್ಧ ಅನುಮತಿ ಸಿಕ್ಕಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ಅವರು ಯಾರನ್ನೂ ಕರೆಯದೆ ಕೇವಲ ಕುಟುಂಬದ ಕಾರ್ಯಕ್ರಮವನ್ನಾಗಿ ಮಾತ್ರ ಮಾಡಲು ನಿರ್ಧರಿಸಿದ್ದರು.

ಇನ್ನೊಂದು ಭಾಗದಲ್ಲಿ ಅಮತ್ರ್ಯ ಹೆಗ್ಡೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆವರ ಮೊಮ್ಮಗ. ತಮ್ಮ ಮೊಮ್ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಹಿರಿಯ ಮುತ್ಸದ್ದಿ ಕೃಷ್ಣ ಅವರು ಅತ್ಯಂತ ಸಂಭ್ರಮ ಸಡಗರದಿಂದ ಭಾಗವಹಿಸಿದ್ದರು. ಸಂಪ್ರದಾಯ ಬದ್ಧ ಶಾಸ್ತ್ರಗಳಲ್ಲಿ ಖುದ್ದಾಗಿ ತೊಡಗಿಕೊಂಡಿದ್ದರು. ಅವರು ಕಾರ್ಯಕ್ರಮಕ್ಕೆ ಆಪ್ತ ಬಳಗದ ಕೆಲವರಿಗಷ್ಟೇ ಆಹ್ವಾನ ನೀಡಿದ್ದರು.

ಅದನ್ನು ಆಧರಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಆರ್.ಅಶೋಕ್, ಸುಧಾಕರ್, ವಿ.ಸೋಮಣ್ಣ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ ಚರ್ಚೆಗೂ ಗ್ರಾಸವಾಗಿದವು.

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ನಾಯಕರ ನಡುವೆ ನಡೆದ ಮಾತಿನ ಸಮರವನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸ್ತಾಪಿಸಿ, ಎದುರಾಳಿಗಳು ಒಳಗೊಳಗೆ ಮಿತ್ರರು ಎಂಬ ಕುಹಕದ ದನಿಗಳು ಕೇಳಿ ಬಂದಿದ್ದವು. ಆದರೆ, ಡಿ.ಕೆ.ಶಿವಕುಮಾರ್ ಅವರು ಯಾರಿಗೂ ನಿಷ್ಟುರವಾಗಬಾರದು ಎಂಬ ಕಾರಣಕ್ಕಾಗಿ ನಿಶ್ವಿತಾರ್ಥ ಕಾರ್ಯಕ್ರಮಕ್ಕೆ ಯಾರನ್ನೂ ಆಹ್ವಾನಿಸಿರಲಿಲ್ಲ. ಎಸ್.ಎಂ.ಕೃಷ್ಣ ಅವರ ಆಹ್ವಾನದ ಮೇರೆಗೆ ಬಂದ ನಾಯಕರಷ್ಟೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook Comments