ಮಾಲ್ಡೀವ್ಸ್ ರಕ್ಷಣಾ ಸಚಿವೆ ಜೊತೆ ಅಜಿತ್ ದೋವಲ್ ಮಹತ್ವದ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ

ಕೊಲೊಂಬೊ, ನ.28-ಮಾಲ್ಡೀವ್ಸ್ ರಕ್ಷಣಾ ಸಚಿವೆ ಮರಿಯಾ ದೀದಿ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಹತ್ವದ ಮಾತುಕತೆ ನಡೆಸಿ ಉಭಯ ರಾಷ್ಟ್ರಗಳ ನಡುವಿನ ದ್ವೀಪಕ್ಷಿಯ ಬಾಂಧವ್ಯ ವೃದ್ಧಿಗೆ ಮುನ್ನುಡಿ ಬರೆದಿದ್ದಾರೆ.

ಹಿಂದೂ ಮಹಾಸಾಗರದಲ್ಲಿ ರಕ್ಷಣೆ ಕುರಿತಂತೆ ಶ್ರೀಲಂಕಾ ಆಯೋಜಿಸಿದ್ದ ನಾಲ್ಕನೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದವು.

ಮಾಲ್ಡೀವ್ಸ್ ಮತ್ತು ಭಾರತ ದೇಶಗಳ ನಡುವೆ ರಕ್ಷಣೆ ಮತ್ತು ಭದ್ರತೆ ವಿಚಾರದಲ್ಲಿ ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಮಾಲ್ಡೀವ್ಸ್‍ನಲ್ಲಿರುವ ಭಾರತದ ಹೈ ಕಮಿಷನ್ ಕಚೇರಿ ಟ್ವಿಟ್ ಮಾಡಿದೆ. ಕಡಲ ತೀರದ ರಕ್ಷಣೆ, ಪರಿಸರ ಸಂರಕ್ಷಣೆ, ಸಮುದ್ರದ ಮೂಲಕ ಮಾದಕ ದ್ರವ್ಯ ಕಳ್ಳ ಸಾಗಾಣಿಕೆ ತಡೆಗಟ್ಟುವುದು ಸೇರಿದಂತೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಇಂಡೋ ಪೆಸಿಫಿಕ್ ಪ್ರಾಂತ್ಯದಲ್ಲಿ ಚೀನಾ ಪ್ರಭಾವ ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುವ ಸಂದರ್ಭದಲ್ಲೇ ಮಾಲ್ಡೀವ್ಸ್ ದ್ವೀಪ ರಾಷ್ಟ್ರದೊಂದಿಗೆ ಮಹತ್ವದ ಒಪ್ಪಂದಕ್ಕೆ ಭಾರತ ಸಹಿ ಹಾಕಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಹಿಂದೂ ಮಹಾಸಾಗರದಲ್ಲಿ ಚೀನಾ ನಿರ್ಮಿಸಲು ಉದ್ದೇಶಿಸಿರುವ ಸಿಲ್ಕ್ ರೋಡ ಪ್ರಾಜೆಕ್ಟ್‍ನಲ್ಲಿ ಮಾಲ್ಡೀವ್ಸ್ ಮಹತ್ವದ ಪಾತ್ರ ನಿರ್ವಹಣೆ ಅತ್ಯಗತ್ಯ ಇಂತಹ ಸಂದರ್ಭದಲ್ಲೇ ಆ ದೇಶದೊಂದಿಗೆ ಭಾರತ ಉತ್ತಮ ಬಾಂಧವ್ಯ ವೃದ್ಧಿಗೆ ಮುಂದಾಗಿದೆ

Facebook Comments