ಕರಾವಳಿ-ಮಲೆನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ, 4 ದಿನ ಭಾರೀ ಮಳೆ ಮುನ್ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.3-ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನತಜ್ಞ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ನಿನ್ನೆ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ಹಾಗೆಯೆ ರಾಜ್ಯದ ಕರಾವಳಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ‌.ಆದರೆ, ರಾಜ್ಯದ ಒತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಾಧಾರಣ ಮಳೆಯಾಗಲಿದೆ.

ಒಳನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಪುರ್ವಾಭಿಮುಖವಾಗಿ ಬರುತ್ತಿದೆ ಮಳೆ ಅವಧಿ ಮುಗಿದಿದ್ದು, ಇನ್ನು ಮುಂದೆ ಪಶ್ಚಿಮಾಭಿಮುಖವಾಗಿ ಮಳೆ ಬರಲಿದೆ ಎಂದರು.

ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೂ ಟ್ರಪ್ ನಿರ್ಮಾಣವಾಗಿರುವುದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಆಗಾಗ್ಗೆ ಹಗುರ ಇಲ್ಲವೇ ಸಾಧಾರಣಾ ಮಳೆ ಬರಬಹುದು. ಆದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

Facebook Comments

Sri Raghav

Admin