ಹಣದುಬ್ಬರ ಏರಿಕೆ: ಸರ್ವಪಕ್ಷ ಸಭೆಗೆ ಕಾಂಗ್ರೆಸ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜ.14-ಹಣದುಬ್ಬರ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದ ಜನರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಸಿದೆ. ಈ ಸಮಸ್ಯೆಯನ್ನು ನಿಭಾಯಿಸಲು ಕೂಡಲೇ ಸರ್ವಪಕ್ಷಗಳ ಸಭೆಯನ್ನು ಕರೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಆಗ್ರಹಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಎಐಸಿಸಿ ಮುಖ್ಯ ವಕ್ತಾರ ರಣದೀಪ್‍ಸಿಂಗ್ ಸುರ್ಜೆವಾಲಾ, ಪ್ರಧಾನಿ ನರೇಂದ್ರ ಮೋದಿ ದೇಶ ವಿಭಜನೆ ಕಾರ್ಯವನ್ನು ಬಿಟ್ಟು ರಾಷ್ಟ್ರದ ಜನರ ಹಿತಾಸಕ್ತಿ ರಕ್ಷಿಸಲು ಮುಂದಾಗಬೇಕು. ಈ ಕೂಡಲೇ ಸರ್ವ ಪಕ್ಷ ಸಭೆ ಕರೆದು ಹಣದುಬ್ಬರ ಏರಿಕೆ ಮತ್ತು ಬೆಲೆ ಹೆಚ್ಚಳ ನಿಯಂತ್ರಣಕ್ಕೆ ಅಗತ್ಯವಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಪ್ರಿಯಾಂಕಾ ವಾಗ್ದಾಳಿ: ಹಣದುಬ್ಬರ ಏರಿಕೆ ಕುರಿತು ಮಾಧ್ಯಮಗಳಲ್ಲಿನ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಮಹಾಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೇಂದ್ರ ಸರ್ಕಾರಕ್ಕೆ ಈ ಸಮಸ್ಯೆಗಳ ಬಗ್ಗೆ ಗಮನವಿಲ್ಲ. ಬದಲಿಗೆ ಅನಗತ್ಯ ಕಾಯ್ದೆ, ಕಾನೂನುಗಳನ್ನು ಜಾರಿಗೊಳಿಸಿ ದೇಶದ ಜನರನ್ನು ಇಕ್ಕಟ್ಟಿಗೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.

Facebook Comments