ಕೊರೋನಾ 2ನೇ ಅಲೆ ಆರ್ಭಟ ಹಿನ್ನೆಲೆಯಲ್ಲಿ ಸದ್ಯದಲ್ಲೇ ಸರ್ವಪಕ್ಷಗಳ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.7- ಕೋವಿಡ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ರಾಜೀವ್ ಗಾಂ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ವಿಶ್ವ ಆರೋಗ್ಯ ದಿನಾಚರಣೆ ಹಾಗೂ ವಿಶ್ವವಿದ್ಯಾಲಯದ ಬೆಳ್ಳಿ ಹಬ್ಬದ ಅಂಗವಾಗಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ವಾಕಥಾನ್‍ಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ಕರೆಯಲಿದ್ದಾರೆ ಎಂದು ಹೇಳಿದರು.

ಚುನಾವಣೆ ಪ್ರಚಾರ ಸಭೆಗಳಲ್ಲಿ 500 ಜನರು ಸೇರಲು ಚುನಾವಣಾಕಾರಿ ಅವಕಾಶ ನೀಡಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ಮಾರ್ಗಸೂಚಿಗಳನ್ನು ಪಾಲಿಸಬೇಕು ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ನೀಡಲಿದೆ. ಕೆಲವು ಇಲಾಖೆಗಳು , ಅಧಿಕಾರಿಗಳು ಅದನ್ನು ಅನುಷ್ಠಾನಗೊಳಿಸಬೇಕು.

ಮಾರ್ಗಸೂಚಿ ಸರಿಯಾಗಿ ಪಾಲನೆಯಾಗದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಅವಕಾಶ ಕಲ್ಪಿಸಲು ನೀಡಿದ್ದ ಗಡುವು ಇಂದು ಮುಗಿಯುತ್ತದೆ. ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಾಗದಿದ್ದರೆ ಇದುವರೆಗಿನ ಮಾರ್ಗಸೂಚಿಯೇ ಅನ್ವಯವಾಗುತ್ತದೆ. ಒಂದು ವೇಳೆ ಬದಲಾವಣೆಯಾದರೆ ಅದಕ್ಕೆ ಅನುಗುಣವಾಗಿರುತ್ತದೆ ಎಂದು ಹೇಳಿದರು.

ವಿಶ್ವ ಆರೋಗ್ಯ ದಿನವನ್ನು ಸರಳವಾಗಿ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಎಲ್ಲಾ ಮೆಡಿಕಲ್ ಕಾಲೇಜು, ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲೂ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕಾಗಿ ಒಳ್ಳೆಯ ಆರೋಗ್ಯ ನೀಡುವುದನ್ನು ಪರಿಗಣಿಸಬೇಕು. ಆರೋಗ್ಯವಂತ ಸಮಾಜದಿಂದ ಆರ್ಥಿಕ ಪ್ರಗತಿಯಾಗಲಿದೆ.

ಅಪಾಯಕಾರಿ ಸಾಂಕ್ರಾಮಿಕ ರೋಗಗಳಿಗೆ ಕೊಟ್ಟಷ್ಟೇ ಮಹತ್ವವನ್ನು ಸಾಂಪ್ರದಾಯಿಕವಲ್ಲದ ರೋಗಗಳಿಗೂ ನೀಡಲಾಗುತ್ತಿದೆ ಎಂದು ಹೇಳಿದರು. ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷವಾಕ್ಯ ಸಮಾದ ಸಮಗ್ರ ಆರೋಗ್ಯ ಸಶಕ್ತ ಎಂಬುದಾಗಿದೆ ಎಂದು ಹೇಳಿದರು.

Facebook Comments

Sri Raghav

Admin