ಸಿನಿಮಾ-ಧಾರವಾಹಿ ಚಿತ್ರೀಕರಣಕ್ಕೆ ಕೇಂದ್ರ ಸರ್ಕಾರ ಅಸ್ತು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಆ.23- ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ, ಧಾರಾವಾಹಿ ಚಿತ್ರೀಕರಣವನ್ನು ಮತ್ತೆ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಿ ಚಿತ್ರೀಕರಣ ಪ್ರಾರಂಭಿಸಬಹುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಚಲನಚಿತ್ರ ಮತ್ತು ಟಿವಿ ಕಾರ್ಯಕ್ರಮದ ಚಿತ್ರೀಕರಣಕ್ಕಾಗಿ ಪ್ರಮಾಣಿತ ಕಾರ್ಯ ವಿಧಾನವನ್ನು (ಎಸ್‍ಒಪಿ) ಬಿಡುಗಡೆ ಮಾಡುತ್ತಿದ್ದೇವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಹೇಳಿರುವ ಜಾವಡೇಕರ್ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.

ಇಂದು ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಟಿವಿ, ಸಿನಿಮಾ ಉದ್ಯಮಗಳಿಗಾಗಿ ಪ್ರಮಾಣಿತ ಕಾರ್ಯ ವಿಧಾನವನ್ನು ಬಿಡುಗಡೆ ಮಾಡಿದೆ. ಈ ಉದ್ಯಮದಲ್ಲಿರುವ ಸಿಬ್ಬಂದಿಗಳಿಗೆ ಸುರಕ್ಷಿತವಾಗಿ ಕಾರ್ಯ ನಿರ್ವಹಿಸುವ ವಾತಾವರಣವನ್ನು ಕಲ್ಪಿಸುವುದು ಇದರ ಉದ್ದೇಶವಾಗಿದೆ.

Facebook Comments

Sri Raghav

Admin