ಸರಗಳ್ಳರ ನಿಯಂತ್ರಣಕ್ಕೆ ಗಸ್ತು ಹೆಚ್ಚಳ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.3- ನಗರದಲ್ಲಿ ಸರಗಳ್ಳರ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ರಾತ್ರಿ ಮತ್ತು ಹಗಲು ವೇಳೆ ಗಸ್ತು ಹೆಚ್ಚಳ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ನಗರದಲ್ಲಿ ಯಾವ ತಂಡ ಸರಗಳ್ಳತನ ಮಾಡಿ ಪರಾರಿಯಾಗುತ್ತಿದೆ ಎಂಬುದನ್ನು ಆದಷ್ಟು ಬೇಗ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಅಪರಾಧಗಳನ್ನು ನಿಯಂತ್ರಿಸಲಾಗುವುದು ಎಂದರು.

ಸಂಜೆ 4ರಿಂದ 6 ಗಂಟೆ ಅವಧಿಯಲ್ಲಿ ಠಾಣಾಧಿಕಾರಿಗಳು ಠಾಣೆಯಲ್ಲಿ ಇರಬೇಕು. ದೂರುದಾರರು ಮತ್ತು ಸಾರ್ವಜನಿಕರು ಠಾಣೆಗೆ ಬಂದರೆ ಅವರಿಗೆ ಸ್ಪಂದಿಸಬೇಕೆಂದು ಈಗಾಗಲೇ ಇನ್‍ಸ್ಪೆಕ್ಟರ್‍ಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

Facebook Comments