ಬೆಂಗಳೂರಿಗೆ ಅಲೋಕ್‍ಕುಮಾರ್ ಕಮಿಷನರ್, ಕ್ರಿಮಿನಲ್‌ಗಳಿಗೆ ಶುರುವಾಯ್ತು ನಡುಕ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.17-ರೌಡಿಗಳಿಗೆ, ಸಮಾಜಘಾತುಕರಿಗೆ ಹಾಗೂ ಕ್ರಿಮಿನಲ್‍ಗಳಿಗೆ ಸಿಂಹಸ್ವಪ್ನ ಈ ಪೊಲೀಸ್ ಅಧಿಕಾರಿ ಅಲೋಕ್‍ಕುಮಾರ್. ಇವರು ಬೆಂಗಳೂರು ನಗರದ ದಕ್ಷಿಣ ವಿಭಾಗದ ಡಿಸಿಪಿಯಾಗಿ ನಗರದಲ್ಲಿ ಸೇವೆ ಆರಂಭಿಸಿ ಈಗ ನಗರದ ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಮತ್ತು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಬೆಂಗಳೂರು ನಗರದ ಪೊಲೀಸ್ ವ್ಯವಸ್ಥೆಯಲ್ಲಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಬೆಂಗಳೂರು ನಗರದ ಕೆಲವು ರೌಡಿಗಳು ನಗರವನ್ನೇ ಬಿಟ್ಟು ಬೇರೆ ಪಟ್ಟಣ, ನಗರಗಳಲ್ಲಿ ವಾಸವಾಗಿದ್ದಾರೆ.  ಬೆಂಗಳೂರು ನಗರದಲ್ಲಿ ಹೆಚ್ಚಾಗಿ ವರದಿಯಾಗುವ ವಂಚನೆ ಪ್ರಕರಣಗಳ ಬಗ್ಗೆ ಹೆಚ್ಚು ಗಮನಹರಿಸುವ ಇವರು, ಕೆಲವು ಪ್ರಕರಣಗಳಲ್ಲಿ ಮುಲಾಜಿಲ್ಲದೆ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರದ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಲೋಕ್‍ಕುಮಾರ್ ಅವರಿಗೆ ಬಡ್ತಿ ನೀಡಿ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin